ಕರ್ನಾಟಕ ಸರ್ಕಾರ ಕೈಮಗ್ಗ ಮತ್ತು ಜವಳಿ ಇಲಾಖೆ

ಜವಳಿ ನಿರ್ದೇಶನಾಲಯದಕಾರ್ಯ ಚಟುವಟಿಕೆಗಳು

ಕೈಮಗ್ಗ ಮತ್ತು ಜವಳಿ ಇಲಾಖೆಯು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದ 4 ವಿಭಾಗ/ವಲಯ ಮಟ್ಟದಲ್ಲಿ ಜಂಟಿ ನಿರ್ದೇಶಕರುಗಳ ಕಚೇರಿಗಳು ಕಾರ್ಯ ನಿರ್ವಹಿಸುತ್ತಿವೆ ಹಾಗೂ ಎಲ್ಲಾ ಜಿಲ್ಲೆಗಳಲ್ಲಿ ಉಪ ನಿರ್ದೇಶಕರು / ಸಹಾಯಕ ನಿರ್ದೇಶಕರು ಜಿಲ್ಲಾ ಮಟ್ಟದ ಅಧಿಕಾರಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಕೈಮಗ್ಗ ಮತ್ತು ಜವಳಿ ಇಲಾಖೆಯು ಜವಳಿ ಅಭಿವೃದ್ದಿ ಆಯುಕ್ತರ ಮುಂದಾಳತ್ವದಲ್ಲಿ ಕಾರ್ಯ ನಿರ್ವಹಿಸುತ್ತಿರುತ್ತದೆ.

ಕೈಮಗ್ಗ ಮತ್ತು ಜವಳಿ ಇಲಾಖೆಯು ಹೊಸದಾಗಿ ನೂತನ ಜವಳಿ ನೀತಿ(2013-18) ಯನ್ನು ಅನುಷ್ಟಾನಗೊಳಿಸುತ್ತಿದ್ದು, ಜವಳಿ ಕ್ಷೇತ್ರದಲ್ಲಿ ಬಂಡವಾಳ ಹೂಡಿಕೆ ಹಾಗೂ ಉದ್ಯೋಗ ಸೃಜನೆ ಮಾಡುವ ಜವಳಿ ಕೈಗಾರಿಕೆಗಳಿಗೆ ಅನೇಕ ಪ್ರೋತ್ಸಾಹನ ಮತ್ತು ರಿಯಾಯಿತಿಗಳನ್ನು ನೀಡಲಾಗುತ್ತಿದೆ. ಇಲಾಖೆಯು ಕೈಮಗ್ಗ ನೇಕಾರರ ಮತ್ತು ವಿದ್ಯುತ್‍ಮಗ್ಗ ನೇಕಾರರ ಅಭಿವೃದ್ದಿಗಾಗಿ ಕೇಂದ್ರ / ರಾಜ್ಯ ಸರ್ಕಾರದ ಅನೇಕ ಯೋಜನೆಗಳನ್ನು ಹತ್ತಿ,ಉಣ್ಣೆ ಮತ್ತು ರೇಷ್ಮೆ ಸಹಕಾರಿ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಂಘಗಳ ಮುಖಾಂತರ ಅನುಷ್ಟಾನಗೊಳಿಸಲಾಗುತ್ತಿದೆ. ಜವಳಿ ಕ್ಷೇತ್ರವು ಅತಿ ಹೆಚ್ಚು ಉದ್ಯೋಗ ನೀಡುವ ಕ್ಷೇತ್ರವಾಗಿದ್ದು ಕೃಷಿಯ ನಂತರದ ಸ್ಥಾನ ಪಡೆದುಕೊಂಡಿರುತ್ತದೆ.

ಕೈಮಗ್ಗ ಮತ್ತು ಜವಳಿ ಇಲಾಖೆಯು ಕೈಮಗ್ಗ ಮತ್ತು ವಿದ್ಯುತ್‍ಮಗ್ಗ ನೇಕಾರರ ಅಭಿವೃದ್ದಿಗಾಗಿ ಅನೇಕ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಟಾನಗೊಳಿಸುತ್ತಿದೆ. ಒಟ್ಟಾರೆಯಾಗಿ ಇಲಾಖೆಯು ನೇಕಾರರ ಶ್ರೇಯಸ್ಸಿಗಾಗಿ ಹಾಗೂ ಅಭಿವೃದ್ದಿಗಾಗಿ ಶ್ರಮ ವಹಿಸುತ್ತಿದೆ.